HomeKarnatakaBIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

BIGG NEWS : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ.

ಏನಿದು ಘಟನೆ

ಜ.1 ರಂದು ಜಿಲ್ಲೆಯ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಗೆ ದಲಿತ ಯುವಕ ಮಾರುತಿ ಎಂಬುವವರು ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದರು.ಮಾರುತಿ ದಲಿತ ಯುವಕ ಎಂದು ಗೊತ್ತಾಗುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿ 20 ಸಾವಿರ ವಸೂಲಿ ಮಾಡಿದ್ದರು. ನಂತರ ಮಾರುತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಜನವರಿ 2 ರಂದು ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು.  ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡ 11ಜನರ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular