HomeLatest Newsದಾವಣಗೆರೆ: ದೇವಸ್ಥಾನ ಪ್ರವೇಶಿಸಿದ ದಲಿತರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ 42 ಮಂದಿ ವಿರುದ್ಧ ಎಫ್‌ಐಆರ್; ಡಿಸಿಯಿಂದ...

ದಾವಣಗೆರೆ: ದೇವಸ್ಥಾನ ಪ್ರವೇಶಿಸಿದ ದಲಿತರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ 42 ಮಂದಿ ವಿರುದ್ಧ ಎಫ್‌ಐಆರ್; ಡಿಸಿಯಿಂದ ಸಮಾನತೆ ಪಾಠ!

ದಾವಣಗೆರೆ: ಯಾದಗಿರಿ ಜಿಲ್ಲೆಯಲ್ಲಿ ಸಮಾಧಿಗೆ ಕುಣಿ ( ಗುಂಡಿ ) ಅಗೆಯಲು ನಿರಾಕರಿಸಿದ ದಲಿತರ ಮೇಲೆ ಹಲ್ಲೆ ಮಾಡಿ, ನೀರು ಬಳಕೆ ಹಾಗೂ ಜಮೀನಿಗೆ ತೆರಳಲು ದಾರಿಗೆ ನಿರಾಕರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದಾವಣಗೆರೆಯಲ್ಲೂ ದಲಿತರ ಮೇಲೆ ದಬ್ಬಾಳಿಕೆ ನಡೆದಿರುವ ಕುರಿತು ದೂರು ದಾಖಲಾಗಿದೆ.

ಹೌದು, ದೇವಸ್ಥಾನಕ್ಕೆ ಪ್ರವೇಶಿಸಿದರು ಎಂಬ ಕಾರಣಕ್ಕೆ ಐವರು ಯುವಕರನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪದ ಮೇಲೆ ದೂರು ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ ಎಂದು ವಾರ್ತಾಭಾರತ ಸುದ್ದಿ ಪ್ರಕಟಿಸಿದ್ದು, ಈ ಪ್ರಕಾರ ಶುಕ್ರವಾರ ( ಜುಲೈ 31 ) ‘ಅಜ್ಜಿಹಬ್ಬ’ದ ಅಂಗವಾಗಿ ಪೂಜೆ ಸಲ್ಲಿಸಿ ಎಡೆಯನ್ನು ಊರಿನ ಗಡಿಭಾಗಕ್ಕೆ ಕೊಂಡೊಯ್ಯುವ ವೇಳೆ ದೊಡ್ಡಯ್ಯಸ್ವಾಮಿ ದೇವಾಲಯದ ಬಳಿ ತೆರಳಿದ್ದರು.

ಈ ವೇಳೆ ಗ್ರಾಮದ ಕೆಲವರು ದೇವಸ್ಥಾನದ ಬಳಿ ಬರಬಾರದು ಎಂದು ಆ ದಲಿತ ಯುವಕರನ್ನು ತಡೆದಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಗಲಭೆಯಲ್ಲಿ ಐವರು ದಲಿತ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಹಲ್ಲೆ ಆರೋಪದ ಮೇಲೆ 42 ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಗಾಯಗೊಂಡ ದಲಿತ ಯುವಕರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಡಾ.ಎಚ್.ಟಿ.ಶೇಖರ್, ಉಪವಿಭಾಗಾಧಿಕಾರಿ ಡಾ. ಚನ್ನಪ್ಪ, ತಹಸೀಲ್ದಾರ್ ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಬಳಿಕ ದಲಿತರಿಗೆ ದೇವಾಲಯ ಪ್ರವೇಶ ನೀಡಿ ದರ್ಶನ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ‘ಕಾನೂನಿನ ಮುಂದೆ ಎಲ್ಲರೂ ಸಮಾನರು. ಜಾತಿ ಆಧಾರಿತ ತಾರತಮ್ಯ ಅಥವಾ ಸಾರ್ವಜನಿಕ ಸ್ಥಳಗಳು, ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಗಳಿಗೆ ಪ್ರವೇಶ ನಿರಾಕರಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು,

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular