HomeIndiaದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ವಿರುದ್ಧ ಪ್ರಕರಣ

ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 5 ಮಂದಿ ವಿರುದ್ಧ ಪ್ರಕರಣ

ಜೈಪುರ: ರಾಜಸ್ಥಾನದ ದೀದ್ವಾನಾ ಕುಚಮನ್ ಜಿಲ್ಲೆಯಲ್ಲಿ 32 ವರ್ಷದ ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದಿವಾನ ವೃತ್ತದ ಅಧಿಕಾರಿ ಧರಮ್ ಚಂದ್ ಪೂನಿಯಾ ಮಾತನಾಡಿ, ಘಟನೆ ಆಗಸ್ಟ್‌ ನಲ್ಲಿ ನಡೆದಿದ್ದರೂ, ಭಾನುವಾರವಷ್ಟೇ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(ಡಿ) (ಗ್ಯಾಂಗ್ ರೇಪ್) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿಶೋರ್ ಮಾಲಿ, ರಾಮ್‌ದೇವ್ ಥಲೋಡ್ ಮತ್ತು ತೇಜ್‌ಪಾಲ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ, ಇನ್ನೂ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೂನಿಯಾ ಹೇಳಿದರು.

ಸಂತ್ರಸ್ತೆಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular