HomeKarnatakaBREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಶ್ರೀಶ(13), ಪ್ರಜ್ವಲ್(14) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ರಜೆ ಹಿನ್ನೆಲೆಯಲ್ಲಿ ನಾಲ್ವರು ಬಾಲಕರು ಮನೆ ಸಮೀಪದ ಡ್ಯಾಂ ಗೆ ಈಜಲು ಹೋಗಿದ್ದಾರೆ. ಈಜುವ ವೇಳೆ ಶ್ರೀಶ ಹಾಗೂ ಪ್ರಜ್ವಲ್ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಶಂಕರನಾರಾಯಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular