BREAKING : ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ : ಎಲ್ಲಾ ಜಿಲ್ಲೆಯ ‘DC’ ಗಳ ಜೊತೆ ‘CM ಸಿದ್ದರಾಮಯ್ಯ’ ಸಭೆಯ ಮುಖ್ಯಾಂಶಗಳು ಹೀಗಿದೆ.!

ಬೆಂಗಳೂರು : ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಇಂದು ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು. ಸಭೆಯ ಮುಖ್ಯಾಂಶಗಳು ಹೀಗಿದೆ.

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು.ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು.

ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8 ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ ಗೇಟ್ಗಳು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮ೦ಡಳಿಯ ವ್ಯಾಪ್ತಿಗೆ ಬರುತ್ತದೆ.

ತುಂಗಾಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು.ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.

ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟುಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 4,80,256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40,407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.

ಮಳೆಗೆ ಸ೦ಬ೦ಧಿಸಿದ೦ತೆ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮ೦ದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55 ಕೋಟಿ ಪರಿಹಾರ ನೀಡಲಾಗಿದೆ.
ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ಪರ್ಟ್ಗಳು, 1877 ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸಾರ್ಮಗ್ರಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ.
651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9,087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು.ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read