ಹಾವೇರಿ: ಹಾವೇರಿಯಲ್ಲಿ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ಕಿಡಿಗೇಡಿಯನ್ನು ಹಾವೇರಿ ಶಹರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ನಗರಸಭೆ ಬಳಿ ಪ್ರತಿಷ್ಠಾಪಿಸಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಭಗ್ನಗೊಳಿಸಿದ ಆರೋಪದ ಮೇಲೆ ವೈಭವ್ ವಿನೋದ್ ರಾಯ್ಕರ್(28) ಎಂಬುವನನ್ನು ಹಾವೇರಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಭಾನುವಾರ ತಡರಾತ್ರಿ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಗಾಂಧಿ ಪ್ರತಿಮೆ ಭಗ್ನಗೊಳಿಸಿದ್ದ.
ಈ ಬಗ್ಗೆ ನಗರಸಭೆ ಪೌರಾಯುಕ್ತ ಎಚ್. ಕಾಂತರಾಜು ಈ ಬಗ್ಗೆ ದೂರು ನೀಡಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ ಮಾನಸಿಕ ಅಸ್ವಸ್ಥ ಎಂದು ಗೊತ್ತಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಪರಿಶೀಲನೆ ನಡೆಸಿದ್ದಾರೆ.

