HomeKarnatakaದಂಡಿಗಾನಹಳ್ಳಿ ಜಲಾಶಯದಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರುಪಾಲು

ದಂಡಿಗಾನಹಳ್ಳಿ ಜಲಾಶಯದಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರುಪಾಲು

ಚಿಕ್ಕಬಳ್ಳಾಪುರ: ಶಾಲೆಗೆ ರಜಾ ದಿನವೆಂದು ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಬಾಲಕಿಯರು ದಂಡಿಗಾನಹಳ್ಳಿ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಬಳಿ ನಡೆದಿದೆ.

ಮುಂಬೈ ಮೂಲದ ಆಲಿಯಾ ಪಾಟೀಲ್ (17), ಜೋಯಾ ಪಾಟೀಲ್ (14) ಮೃತ ಬಾಲಕಿಯರು. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಗೌರಿಬಿದನೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ದಂಡಿಗಾನಹಳ್ಳಿ ಜಲಾಶಯ ನೋಡಲೆಂದು ಹೋಗಿದ್ದರು.

ಜಲಾಸಯ ನೋಡಲೆದು ಹೋದವರು ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular