
ಈ ಬಗ್ಗೆ ಮೈಸೂರು ಗ್ರಾ. ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಮಾಹಿತಿ ನೀಡಿದ್ದು, ನಂಜನಗೂಡಿನ ಘಟಕದಲ್ಲಿ ತಯಾರಿಸಲಾಗಿದ್ದ ಬಿಯರ್ ಸ್ಟ್ರಾಂಗ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.
ಒಟ್ಟು 78,678 ಬಿಯರ್ ಬಾಕ್ಸ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಉತ್ತ, ಗುಣಮಟ್ಟದ ಬಿಯರ್ ತಯಾರಿಸದ ಹಿನ್ನೆಲೆ ಎಫ್ಐಆರ್ ದಾಖಲಾಗಿದ್ದು, ಬಿಯರ್ ಸೇಲ್ ಆಗದಂತೆ ತಡೆಹಿಡಿಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

