HomeLatest NewsBREAKING: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನವೆಂಬರ್ 3ಕ್ಕೆ ದೋಷಾರೋಪ ನಿಗದಿ...

BREAKING: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನವೆಂಬರ್ 3ಕ್ಕೆ ದೋಷಾರೋಪ ನಿಗದಿ ಮಾಡಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಸಲ್ಲಿಸಲು ಕೋರ್ಟ್ ದಿನಾಂಕ ನಿಗದಿ ಮಾಡಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು ಚಾರ್ಜ್ ಶೀಟ್ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ೫೭ನೇ ಸಿಸಿಹೆಚ್ ಕೋರ್ಟ್, ನವೆಂಬರ್ 3ಕ್ಕೆ ದೋಷಾರೋಪ ಸಲ್ಲಿಸಲು ದಿನಾಂಕ ನಿಗದಿ ಮಾಡಿದೆ.

ಇದೇ ವೇಳೆ ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಕೋರ್ಟ್ ವಿಚಾರಣೆ ವೇಳೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಆರು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular