HomeLatest Newsರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ರಾಜ್ಯದ ಕುಸ್ತಿಪಟುಗಳಿಗೆ ನಟ ದರ್ಶನ್ ಆರ್ಥಿಕ ನೆರವು ಘೋಷಣೆ

ಬೆಂಗಳೂರು: ರಾಜ್ಯದ ಕುಸ್ತಿಪಟುಗಳಿಗೆ ಕೈಲಾದಷ್ಟು ಆರ್ಥಿಕ ಸಹಾಯ ನೀಡುವುದಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘೋಷಿಸಿದ್ದಾರೆ.

ಸಂಕ್ರಾಂತಿ ಹಿನ್ನೆಲೆಯಲ್ಲಿ ಬಸವಣ್ಣ ದೇವಾಲಯ ಸೇವಾ ಸಮಿತಿ ಸೋಂಪುರದ ಬಸವೇಶ್ವರ ದೇವಾಲಯ ವತಿಯಿಂದ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಸ್ತಿಪಟುಗಳಿಗೆ ನೆರವು ನೀಡಲು ಬದ್ಧವಾಗಿದ್ದೇನೆ. ರಾಜ್ಯದಲ್ಲಿರುವ ಕುಸ್ತಿಪಟುಗಳನ್ನು ಗುರುತಿಸಬೇಕು ಎಂದು ಹೇಳಿದ ಅವರು, ಕುಸ್ತಿ ಪಂದ್ಯಾವಳಿಯಲ್ಲಿ ಸ್ನೇಹಿತ ವಿಕ್ರಂ ಕಾಟೆ ಪ್ರಶಸ್ತಿ ಗೆದ್ದಿರುವುದು ಸಂತಸ ತಂದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರ್ಯಕ್ರಮದಲ್ಲಿ ನಟ ಚಿಕ್ಕಣ್ಣ, ಎಂ. ರುದ್ರೇಶ್ ಮೊದಲಾದವರು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular