HomeKarnatakaBIG NEWS: ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್

BIG NEWS: ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ.

ನಟ ದರ್ಶನ್ ಹಾಗೂ ಅಭಿಮಾನಿಗಳ ವಿರುದ್ಧ ಲಾಯರ್ ಜಗದೀಶ್ ದೂರು ದಾಖಲಿಸಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಹೊರಬಂದಿರುವ ಲಾಯರ್ ಜಗದೀಶ್, ಸಾಮಾಜಿಕ ಜಾಲತಾಣಗಳಲ್ಲಿ ಎಂದಿನಂತೆ ಮತ್ತೆ ಸದ್ದು ಮಾಡುತ್ತಿದ್ದಾರೆ. ಈ ವೇಳೆ ನಟ ದರ್ಶನ್ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ದರ್ಶನ್ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಾ ಟೀಕಿಸಿದ್ದರು. ಇದೇ ವಿಚಾರವಾಗಿ ಲಾಯರ್ ಜಗದೀಶ್ ಗೆ ದರ್ಶನ್ ಕೆಲ ಅಭಿಮನಿಗಳು ಬೆದರಿಕೆಯೊಡ್ಡಿದ್ದಾರಂತೆ. ಹಾಗಾಗಿ ದರ್ಶನ್ ಹಾಗೂ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಲಾಯರ್ ಜಗದೀಶ್, ನಾನು ದರ್ಶನ್ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ದರ್ಶನ್ ಅಭಿಮಾನಿಗಳು ನನಗೆ ಬೆದರಿಕೆ ಹಾಕಿದ್ದಾರೆ. ಎರಡು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ಕರೆಗಳನ್ನು ಮಾಡಿ ನನಗೆ ಜೀವ ಬೆದರಿಕೆಯೊಡ್ಡಿದ್ದಾರೆ. ದರ್ಶನ್ ಅಭಿಮಾನಿ ರಿಷಿ ಎಂಬಾತ ಹಲವು ಬಾರಿ ನನಗೆ ಕರೆ ಮಾಡಿ ಕೊಲೆ ಮಾಡುವುದಾಗಿ ಹೆದರಿಸಿದ್ದಾನೆ. ಇದನ್ನೆಲ್ಲ ದರ್ಶನ್ ಮಾಡಿಸುತ್ತಿದ್ದು, ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular