HomeEntertainmentಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್ ಮಾಡಿದ್ದಾರೆ.

ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೆಜ್ ಕಳುಹಿಸಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ನಟ ದರ್ಶನ್ ಹಾಗೂ ಗ್ಯಾಂಗ್ ಹತ್ಯೆ ಮಾಡಿದ್ದು, ಈವರೆಗೆ 14 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ತೀವ್ರವಾಗಿ ಮನನೊಂದಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿನ್ನೆ ಇನ್ ಸ್ಟಾಗ್ರಾಂ ಪ್ರೊಫೈಲ್ ಪಿಕ್ಚರ್ ಬದಲಾಯಿಸಿದ್ದರು. ಅಲ್ಲದೇ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದರು.

ಇತ್ತೀಚೆಗೆ ದುಬೈಗೆ ತೆರಳಿದ್ದ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇನ್ ಸ್ಟಾಗ್ರಾಂ ಖಾತೆಯಲ್ಲಿ ಆ ಸಂದರ್ಭಗಳ ಫೋಟೋ ಹಂಚಿಕೊಂಡಿದ್ದ ವಿಜಯಲಕ್ಷ್ಮೀ ನಿನ್ನೆ ಆ ಫೋಟೋಗಳನ್ನು ಡಿಲಿಟ್ ಮಾಡಿದ್ದರು. ಇದೀಗ ಅಂತಿಮವಾಗಿ ಇನ್ ಸ್ಟಾಗ್ರಾಂ ಖಾತೆಯನ್ನೇ ಡಿಲಿಟ್/ಡಿ ಆಕ್ಟಿವೇಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular