BIG NEWS: ನೆಚ್ಚಿನ ನಟನ ಸಂಸಾರ ಸರಿಮಾಡಲು ಹೋಗಿ ಕೊಲೆಯಾದನಾ ರೇಣುಕಾಸ್ವಾಮಿ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾಸ್ವಾಮಿ, ಅಸಲಿಗೆ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಕೂಡ ಆಗಿದ್ದ ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಆರೋಪದಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ.

ಪವಿತ್ರಾ ಗೌಡ ವಿಚಾರದಿಂದಾಗಿಯೇ ಈ ಹಿಂದೆ ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ನಡುವೆ ಮನಸ್ತಾಪ ಉಂಟಾಗಿತ್ತು. ಹಲವು ವರ್ಷಗಳ ಬಳಿಕ ಇತ್ತೀಚೆಗಷ್ಟೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಮತ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಮತದಾನದ ವೇಳೆ, ವಿದೇಶ ಪ್ರವಾಸದ ವೇಳೆ ಇಬ್ಬರು ಜೊತೆಯಲ್ಲಿ ಕಾಣಿಸಿಕೊಂಡಿದ್ದರು. ಇದು ಅಭಿಮಾನಿಗಳಿಗೂ ಖುಷಿ ನೀಡಿತ್ತು. ಆದರೆ ಪವಿತ್ರಾ ಗೌಡ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಕ್ಯಾತೆ ತೆಗೆದು ಪೋಸ್ಟ್ ಮಾಡುತ್ತಿದ್ದರು. ಇದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕೂಡ ಸಾಕಷ್ಟು ಬಾರಿ ತಿರುಗೇಟು ನೀಡಿದ್ದರು.

ಕೊಲೆಯಾಗಿರುವ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಎನ್ನಲಾಗುತ್ತಿದ್ದು, ಪವಿತ್ರಾ ಗೌಡ ಕಾರಣಕ್ಕೆ ತನ್ನ ನೆಚ್ಚಿನ ನಟ ದರ್ಶನ್ ದಾಂಪತ್ಯದಲ್ಲಿ ಮನಸ್ತಾಪ ಉಂಟಾಗುತ್ತಿದೆ ಎಂಬುದನ್ನು ತಿಳಿದು ಬೇಸರಗೊಂಡಿದ್ದ ಎನ್ನಲಾಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಚನ್ನಾಗಿರಬೇಕು ಎಂಬ ಕಾರಣಕ್ಕೆ ಪವಿತ್ರಾ ಗೌಡಗೆ ಸೋಷಿಯಲ್ ಮೀಡಿಯಾದಲ್ಲಿಯೂ ಬೈದಿದ್ದ ಎನ್ನಲಾಗಿದೆ.

ತನ್ನ ನೆಚ್ಚಿನ ನಟನ ಸಂಸಾರ ಸರಿಯಾಗಲಿ ಎಂದು ಭಾವಿಸಿದ್ದ ರೇಣುಕಾಸ್ವಾಮಿ, ಏನೋ ಮಾಡಲು ಹೋಗಿ ತಾನೇ ಬರ್ಬರವಾಗಿ ಹತ್ಯೆಯಾಗಿ ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಹಾಗೂ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದ್ದು, ಕೊಲೆ ಹಿಂದಿನ ನಿಖರ ಕಾರಣ ಸತ್ಯಾಸತ್ಯತೆ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read