HomeEntertainmentBIG NEWS: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನುನೋವು; ಚಿಕಿತ್ಸೆಗಾಗಿ ಮನವಿ ಮಾಡಿದ ಪತ್ನಿ...

BIG NEWS: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನುನೋವು; ಚಿಕಿತ್ಸೆಗಾಗಿ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನು ನೋವು, ಕೈ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬಳ್ಳಾರಿ ಜೈಲಿಗೆ ದರ್ಶನ್ ಭೇಟಿಗೆ ಬಂದಿದ್ದ ಪತ್ನಿ ವಿಜಯಲಕ್ಷ್ಮೀ ಕೂಡ ದರ್ಶನ್ ಬೆನ್ನು ನೋವು, ಕೈ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಡಿಐಜಿ ಅವರಿಗೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡಿಐಜಿ ಶೇಷ, ಬೆನ್ನುನೋವು, ಕೈ ನೋವು ಅಂತಹ ದೊಡ್ಡ ಸಮಸ್ಯೆಯೇನಲ್ಲ. ಅವರಿಗೆ ಬೆನ್ನು ನೋವಿನ ಸಮಸ್ಯೆ ಇದ್ದರೆ ಆಸ್ಪತ್ರೆಯ ದಾಖಲೆ ನೀಡಿ. ಜೈಲಿನ ವೈದ್ಯರೇ ಚಿಕಿತ್ಸೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular