HomeKarnatakaBIG NEWS: ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ:...

BIG NEWS: ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಕಮಿಷ್ನರ್ ದಯಾನಂದ್ ಮಾಹಿತಿ

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಕೋರಿ ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮಿಷ್ನರ್ ದಯಾನಂದ್, ಮೇಲ್ಮನವಿ ಸಲ್ಲಿಸಲು ಈಗಾಗಲೇ ಸಿದ್ಧತೆ ನಡೆಸಲಾಗುತ್ತಿದೆ. ಕನ್ನಡದಲ್ಲಿರುವ ಮಾಹಿತಿ ಇಂಗ್ಲೀಷಿನಲ್ಲಿ ಭಾಷಾಂತರಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನು ನೋವು ಕಾರಣಕ್ಕೆ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular