BREAKING: ನಟ ದರ್ಶನ್ ಗೆ ಮತ್ತೆ ಜೈಲೂಟ ಫಿಕ್ಸ್: ಬಳ್ಳಾರಿ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್ ನೀಡಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತಕ್ಷಣ ದರ್ಶನ್ ಸೇರಿದಂತೆ ಏಳು ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಕುವಾಸ ಫಿಕ್ಸ್ ಆಗಿದೆ.

ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಕಾರಣಕ್ಕೆ ದರ್ಶನ್ ನನ್ನು ಈ ಹಿಂದೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಆಬಳಿಕ ಬೆನ್ನು ನೋವು ಕಾರಣ ನೀಡಿ ಚಿಕಿತ್ಸೆ ನೆಪ ಹೇಳಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ದರ್ಶನ್ ನನ್ನು ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಬಳ್ಳಾರಿ ಜೈಲಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read