HomeKarnatakaದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು...

ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಸದ್ಯ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ಪೊಲೀಸರು ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ದರ್ಶನ್ ಮಧ್ಯಂತರ ಜಾಮೀನಿಗೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ವಿಳಂಬವೇನೂ ಆಗಿಲ್ಲ. ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನ ಮಾಡುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಕೂಡ ಸೂಚನೆ ನೀಡಿದ್ದೇನೆ ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ. ಮೇಲ್ಮನವಿ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ಪಡೆದುಕೊಳ್ಳಬೇಕು. ಪೊಲೀಸ್ ಇಲಖೆಯಿಂದಲೂ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮನ ಕೈಗೊಳ್ಳುತ್ತದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular