HomeEntertainmentBIG NEWS: ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ: ವಿಜಯಲಕ್ಷ್ಮೀ ದರ್ಶನ್ ಪೋಸ್ಟ್

BIG NEWS: ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ: ವಿಜಯಲಕ್ಷ್ಮೀ ದರ್ಶನ್ ಪೋಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕಾಮಾಕ್ಯ ದೇವಸ್ಥಾನದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ನಿರಂತರವಾಗಿ ಹೋರಾಟ ನಡೆಸಿದ್ದರು, ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ, ಹೋಮಗಳನ್ನು ಮಾಡಿಸಿದ್ದರು. ಇದೀಗ ದರ್ಶನ್ ಗೆ ವೈದ್ಯಕೀಯ ಚಿಕಿತ್ಸೆಗಾಗಿ ಹೈಕೋರ್ಟ್ ನಿಂದ 6 ವಾರಗಳ ಮಧ್ಯಂತ ಜಾಮೀನು ಸಿಕ್ಕಿದ್ದು, ಪತ್ನಿ ವಿಜಯಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ವಿಜಯಲಕ್ಷ್ಮೀ, ಕಾಮಾಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ. ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular