HomeEntertainmentBIG NEWS: ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯ: ವಿಚಾರಣೆ ಬಳಿಕ ನಟ ದರ್ಶನ್ ಬಳ್ಳಾರಿ...

BIG NEWS: ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯ: ವಿಚಾರಣೆ ಬಳಿಕ ನಟ ದರ್ಶನ್ ಬಳ್ಳಾರಿ ಜೈಲ್ ಗೆ ಶಿಫ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ನನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಸಲಾಗಿದೆ.

ಕೊಲೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ನನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗುತ್ತಿದೆ.

ವಿಚಾರಣೆ ಬಳಿಕ ನಟ ದರ್ಶನ್ ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವ ಸಾಧ್ಯತೆ ಇದೆ. ಕೋರ್ಟ್ ವಿಚಾರಣೆ ಪ್ರಕ್ರಿಯೆ ಬಳಿಕ ನಟ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜೈಲಧಿಕಾರಿಗಳು ಹಾಗೂ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular