HomeKarnatakaBIG NEWS: ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ: ಕೇರ್ ಟೇಕರ್ಸ್ ಬಿಟ್ಟು...

BIG NEWS: ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ: ಕೇರ್ ಟೇಕರ್ಸ್ ಬಿಟ್ಟು ಬೇರೆ ಯಾರಿಗೂ ಇಲ್ಲ ಎಂಟ್ರಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತೆಯಲ್ಲಿ ದರ್ಶನ್ ಗೆ ಸ್ಪೆಷಲ್ ಸೂಟ್ ವ್ಯವಸ್ಥೆ ಮಾಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟ ದರ್ಶನ್ ಭೇಟಿಗೆ 7 ಜನರು ಕೇರ್ ಟೇಕರ್ಸ್ ಇದ್ದು, ಅವರನ್ನು ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular