HomeKarnatakaBREAKING NEWS: ಬಿಜಿಎಸ್ ಆಸ್ಪತ್ರೆಗೆ ದಾಖಲಾದ ನಟ ದರ್ಶನ್

BREAKING NEWS: ಬಿಜಿಎಸ್ ಆಸ್ಪತ್ರೆಗೆ ದಾಖಲಾದ ನಟ ದರ್ಶನ್

ಬೆಂಗಳೂರು: ಚಿಕಿತ್ಸೆಗಾಗಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ಎ2 ಆರೋಪಿ ನಟ ದರ್ಶನ್, ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಅ.30ರಂದು ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ನಿಟ್ಟಿನಲ್ಲಿ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್, ಇಂದು ಕೆಂಗೇರಿ ಬಳಿಯ ವಿಷ್ಣುವರ್ಧನ್ ರಸ್ತೆಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಇಂದು ಮಧ್ಯಾಹ್ನ ಪತ್ನಿ ವಿಜಯಲಕ್ಷ್ಮೀ ಜೊತೆ ಆಸ್ಪತ್ರೆಗೆ ಆಗಮಿಸಿದ ದರ್ಶನ್, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅಡ್ಮಿಟ್ ಆಗಿದ್ದಾರೆ. ತಜ್ಞ ವೈದ್ಯರಿಂದ ದರ್ಶನ್ ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular