HomeKarnatakaಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್, ಸಂಸದೆ ಸುಮಲತಾ ಪ್ರಚಾರ

ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್, ಸಂಸದೆ ಸುಮಲತಾ ಪ್ರಚಾರ

ಮಂಡ್ಯ: ನಟ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಈಗ ನಟ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರವಾಗಿ ಸಂಸದೆ ಸಮ್ಮಲತಾ ಅಂಬರೀಶ್ ಮತ್ತು ನಟ ದರ್ಶನ್ ಪ್ರಚಾರ ನಡೆಸಿದ್ದಾರೆ. ಶ್ರೀರಂಗಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ ಅವರು ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಅವರಿಗೆ ಸಾಥ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರವಣಿಗೆ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದಾಗ ದರ್ಶನ್ ವಾಹನದಿಂದ ಕೆಳಗಿಳಿದು ತೆರಳಿದ್ದಾರೆ. ಅವರು ಚುನಾವಣಾಧಿಕಾರಿ ಕಚೇರಿಗೆ ತೆರಳಲಿಲ್ಲ. ಸಂಸದೆ ಸುಮಲತಾ ಅಂಬರೀಶ್ ಚುನಾವಣಾ ಅಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು. ಈ ಬಾರಿ ಆಶ್ಚರ್ಯಕರ ಫಲಿತಾಂಶ ಹೊರಬೀಳಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular