HomeKarnatakaಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯದಲ್ಲಿಂದು ನಟ ದರ್ಶನ್ ಭರ್ಜರಿ ಪ್ರಚಾರ

ಮಂಡ್ಯ: ಮಂಡ್ಯದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಪ್ರಚಾರ ಕೈಗೊಂಡಿದ್ದಾರೆ. ಬೆಳಿಗ್ಗೆಯಿಂದ ಸಂಜೆಯವರೆಗೂ ಪ್ರಚಾರ ಕೈಗೊಂಡಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಡ್ಯ ಜಿಲ್ಲೆ ಹಲಗೂರು ಪಟ್ಟಣದಿಂದ ಪ್ರಚಾರ ಆರಂಭಿಸಲಿದ್ದು, ಕಾಂಗ್ರೆಸ್ ಪರ ಮತಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಸಂಸದೆ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ನಡೆಸುವುದಾಗಿ ದರ್ಶನ್ ಹೇಳಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಈ ಬಾರಿ ಸ್ಪರ್ಧಿಸಿಲ್ಲ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಅವರು ಭರ್ಜರಿ ಪ್ರಚಾರ ನಡೆಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular