HomeKarnatakaBIG NEWS: ನಟ ದರ್ಶನ್ ಅರೆಸ್ಟ್ ಪ್ರಕರಣ: ಪೊಲೀಸರ ಮೇಲೆ ಗೌರವ, ನಂಬಿಕೆ ಹೆಚ್ಚಾಗಿದೆ ಎಂದ...

BIG NEWS: ನಟ ದರ್ಶನ್ ಅರೆಸ್ಟ್ ಪ್ರಕರಣ: ಪೊಲೀಸರ ಮೇಲೆ ಗೌರವ, ನಂಬಿಕೆ ಹೆಚ್ಚಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶ ಹಾಗೂ ಗ್ಯಾಂಗ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೆಗೌಡ, ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, ದರ್ಶನ್ ಬಂಧನ ವಿಚಾರವಾಗಿ ಪೊಲೀಸರ ಮೇಲೆ ಜನರಿಗೆ ನಂಬಿಕೆ, ಗೌರವ ಹೆಚ್ಚಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳೇ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿದ್ದಾರೆ ಎಂದರು.

ಸ್ವತಃ ನಾನೇ ವಿಡಿಯೋ ನೋಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇದರಿಂದ ಯಾರೂ ದರ್ಶನ್ ಪರ ಮಾತನಾಡಬಾರದು ಎಂದು ಸೂಚನೆ ನೀಡಿದ್ದಾರೆ. ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular