HomeKarnatakaBIG NEWS: 'ಡಿ' ಗ್ಯಾಂಗ್ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್: ಕಾರಾಗೃಹದ ಮೇಲೆ ಪೊಲೀಸ್...

BIG NEWS: ‘ಡಿ’ ಗ್ಯಾಂಗ್ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಶಿಫ್ಟ್: ಕಾರಾಗೃಹದ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ದರ್ಶನ್ ಹಾಗೂ ಗ್ಯಾಂಗ್ ನ ಆರೋಪಿಗಳನ್ನು ರಾಜ್ಯದ ವಿವಿಧ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಹಾಗೂ ಗ್ಯಾಂಗ್ ಗೆ ರಾಜಾತಿಥ್ಯ ನೀಡಲಾದ ಪ್ರಕರಣದ ಬಳಿಕ ‘ಡಿ’ ಗ್ಯಾಂಗ್ ಆರೋಪಿಗಳನ್ನು ದಿಕ್ಕಾಪಾಲು ಮಾಡಲಾಗುತ್ತಿದೆ. ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ನನ್ನು ಇಂದು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

ಈ ನಡುವೆ ಡಿ ಗ್ಯಾಂಗ್ ನ ಕೆಲ ಆರೋಪಿಗಳನ್ನು ಧಾರವಾಡ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಓರ್ವ ಆರೋಪಿ ಕಲಬುರ್ಗಿ ಜೈಲು, ಓರ್ವ ಹಿಂಡಲಗಾ ಜೈಲು, ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ6 ಆರೋಪಿ ಜಗದೀಶ್ ಹಾಗೂ ಎ12 ಲಕ್ಷ್ಮಣ್ ನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜೈಲಿನ ಮೇಲೆ ಇಂದು ಮುಂಜಾನೆ 4 ಗಂಟೆಗೆ ಶಿವಮೊಗ್ಗ ಎಸ್ ಪಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular