HomeKarnatakaನಟ ದರ್ಶನ್ ಬಾಡಿಗಾರ್ಡ್ ನಿಂದ ಹಲ್ಲೆ ಆರೋಪ: ಪೊಲೀಸರಿಗೆ ದೂರು

ನಟ ದರ್ಶನ್ ಬಾಡಿಗಾರ್ಡ್ ನಿಂದ ಹಲ್ಲೆ ಆರೋಪ: ಪೊಲೀಸರಿಗೆ ದೂರು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಾಡಿಗಾರ್ಡ್ ಮತ್ತು ಇತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಕೆ.ಪಿ. ದಯಾನಂದ್ ಎಂಬುವರು ರಾಜರಾಜೇಶ್ವರಿ ನಗರ ಠಾಣೆಗೆ ದೂರು ನೀಡಿದ್ದಾರೆ.

ಫೆ. 16 ರಂದು ಸಂಜೆ ದರ್ಶನ್ ಅವರ ಜನ್ಮದಿನದ ಕಾರ್ಯಕ್ರಮದ ಚಿತ್ರೀಕರಣಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ‘ವಿ2 ನ್ಯೂಸ್’ youtube ಚಾನೆಲ್ ಕ್ಯಾಮೆರಾಮನ್ ದಯಾನಂದ್ ಅವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆ ಬಳಿ ಅಭಿಮಾನಿಗಳು ಸೇರಿದ್ದ ವೇಳೆ ದರ್ಶನ್ ಅವರು ಇರಲಿಲ್ಲ ಎಂಬುದು ನಮಗೆ ಗೊತ್ತಿರಲಿಲ್ಲ. ಚಿತ್ರೀಕರಣ ಮಾಡುವಾಗ ಬಾಡಿಗಾರ್ಡ್ ಮತ್ತು ಕೆಲವರು ಅಡ್ಡಿಪಡಿಸಿ ಕ್ಯಾಮೆರಾ, ಮೊಬೈಲ್ ಕಸಿದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದ್ದು, ದೂರಿನಲ್ಲಿ ಗೊಂದಲ ಇರುವ ಕಾರಣ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಎನ್.ಸಿ.ಆರ್. ದಾಖಲಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular