HomeLatest Newsದರ್ಶನ್ ಗೆ ಜೈಲಿನಲ್ಲಿ ದಿಂಬು, ಹಾಸಿಗೆ ನೀಡದ ಪ್ರಕರಣ: ಕಾನೂನು ಪ್ರಾಧಿಕಾರ ಸದಸ್ಯರಿಂದ ಇಂದು ಪರಪ್ಪನ...

ದರ್ಶನ್ ಗೆ ಜೈಲಿನಲ್ಲಿ ದಿಂಬು, ಹಾಸಿಗೆ ನೀಡದ ಪ್ರಕರಣ: ಕಾನೂನು ಪ್ರಾಧಿಕಾರ ಸದಸ್ಯರಿಂದ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ

ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿಂಬು, ಹಾಸಿಗೆ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಇಂದು ಕಾನೂನು ಪ್ರಾಧಿಕಾರದ ಸದಸ್ಯರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ. ಎರಡನೇ ಬಾರಿ ಜೈಲು ಸೇರಿರುವ ದರ್ಶನ್, ತನಗೆ ಕೋರ್ಟ್ ಆದೇಶ ನೀಡಿದರೂ ಜೈಲಿನ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಕಾನೂನು ಪ್ರಾಧಿಕಾರ ಕಾರ್ಯದರ್ಶಿ ಜೈಲಿಗೆ ಭೇಟಿ ನೀಡಿ ದರ್ಶನ್ ಇರುವ ಕ್ವಾರಂಟೈನ್ ಸೆಲ್ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಕೋರ್ಟ್ ಗೆ ವರದಿ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular