HomeKarnatakaನಟ ದರ್ಶನ್ ಗೆ ಜೈಲಾ...? ಬೇಲಾ...? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ...

ನಟ ದರ್ಶನ್ ಗೆ ಜೈಲಾ…? ಬೇಲಾ…? ಇಂದು ಜಾಮೀನು ಅರ್ಜಿ ವಿಚಾರಣೆ: ಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 21ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಿತ್ತು. ಇಂದು ದರ್ಶನ್ ಅರ್ಜಿ ವಿಚಾರಣೆಗೆ ಬರಲಿದ್ದು, ಕಾಮಾಕ್ಷಿಪಾಳ್ಯ ಠಾಣೆ ತಾನಿಕಾಧಿಕಾರಿಗಳು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ದರ್ಶನ್ ಸೇರಿದಂತೆ 17 ಆರೋಪಿಗಳ ವಿರುದ್ಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular