ಪೂರ್ಣಗೊಳ್ಳುವ ಹಂತಕ್ಕೆ ರೇಣುಕಾಸ್ವಾಮಿ ಕೊಲೆ ತನಿಖೆ: ನಾಳೆ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿಗೆ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಸ್ವ ಇಚ್ಛಾ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳದಲ್ಲಿ ಮಹಜರು ಕಾರ್ಯ ಪೂರ್ಣಗೊಂಡಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ತನಿಖೆಗೆ ಬೇಕಾದ ಅಗತ್ಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿ ತನಿಖೆ ಮುಂದುವರೆಸಿದ್ದು, ಬಹುತೇಕ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಂದಿದ್ದಾರೆ. ನಾಳೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ಕೋರಮಂಗಲದ ಜಡ್ಜ್ ನಿವಾಸಕ್ಕೆ ಆರೋಪಿಗಳನ್ನು ಕರೆದೊಯ್ದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತಯಾರಿ ಮಾಡಿಕೊಂಡಿದ್ದಾರೆ. ನಾಳೆ ದರ್ಶನ್ ಮತ್ತು ಸಹಚರರು ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read