HomeLatest NewsBIG NEWS: ಜೈಲಲ್ಲಿ ರೇಪಿಸ್ಟ್ ಉಮೇಶ್ ರೆಡ್ಡಿಗೆ ಕಲರ್ ಟಿವಿ ಕೊಡಲಾಗಿದೆ: ಆದರೆ ದರ್ಶನ್ ಗೆ...

BIG NEWS: ಜೈಲಲ್ಲಿ ರೇಪಿಸ್ಟ್ ಉಮೇಶ್ ರೆಡ್ಡಿಗೆ ಕಲರ್ ಟಿವಿ ಕೊಡಲಾಗಿದೆ: ಆದರೆ ದರ್ಶನ್ ಗೆ ಯಾವುದೇ ಸೌಲಭ್ಯ ನೀಡಿಲ್ಲ: ದರ್ಶನ್ ಪರ ವಕೀಲರ ವಾದ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರ ಸೌಲಭ್ಯ ನೀಡುವಂತೆ ಕೋರ್ಟ್ ನೀಡಿದ್ದ ಆದೇಶವನ್ನು ಜೈಲಾಧಿಕಾರಿಗಳು ಉಲ್ಲಂಘನೆ ಮಾಡಿದ್ದು, ದರ್ಶನ್ ಗೆ ಯಾವುದೇ ಸವಲತ್ತು ನೀಡುತ್ತಿಲ್ಲ ಎಂದು ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಆರಂಭವಾಗಿದೆ.

ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ದರ್ಶನ್ ಪರ ವಕೀಲ ಸುನಿಲ್, ಕೋರ್ಟ್ ಆದೇಶ ನೀಡಿದರೂ ದರ್ಶನ್ ಗೆ ಯಾವುದೇ ಸವಲತ್ತು ನೀಡುತ್ತಿಲ್ಲ ಎಂದು ವಾದಿಸಿದ್ದಾರೆ.

ಅಲ್ಲದೇ ರೇಪಿಸ್ಟ್ ಉಮೇಶ್ ರೆಡ್ದಿಗೆ ಜೈಲಲ್ಲಿ ಕಲರ್ ಟಿವಿ ಕೊಡಲಾಗಿದೆ. ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್ ಗೆ ಅನ್ವಯವಾಗಿದೆ. ಕೋರ್ಟ್ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular