HomeEntertainmentನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು ಆರೋಗ್ಯ ಸ್ಥಿತಿ ವರದಿ ಆಧರಿಸಿ ಆಪರೇಷನ್ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, ದರ್ಶನ್ ಮತ್ತು ಕುಟುಂಬದವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ವೈದ್ಯಕೀಯ ವರದಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ಈಗಾಗಲೇ ದರ್ಶನ್ ಗೆ ಅನೇಕ ರೀತಿಯ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ, ಚಿಕಿತ್ಸೆ ವರದಿಯನ್ನು ವೈದ್ಯರು ಸಿದ್ಧಪಡಿಸಲಿದ್ದು, ವರದಿಯನ್ನು ದರ್ಶನ್ ಪರ ವಕೀಲರು ಕೋರ್ಟ್ ಗೆ ಸಲ್ಲಿಸಲಿದ್ದಾರೆ. ಮಂಗಳವಾರ ಕೋರ್ಟ್ ಗೆ ವೈದ್ಯಕೀಯ ವರದಿ ಸಲ್ಲಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular