HomeKarnatakaಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ...

ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ ಬಗ್ಗೆ ಸಿ.ಟಿ. ರವಿ ಮಹತ್ವದ ಹೇಳಿಕೆ

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ದರ್ಶನ್ ಮತ್ತು ಸಹಚರರಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಲ್ಲ ಎಂಬುದು ನಟ ದರ್ಶನ್ ಪ್ರಕರಣ ನೋಡಿದಾಗ ನಿಜ ಅನ್ನಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದವರ ಜೊತೆ ಇರುತ್ತದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಎಸಗುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲೆ ಸಾಕಷ್ಟು ಟೀಕೆಗಳು ಬರುತ್ತಿರುತ್ತವೆ. ಹಾಗಂತ ಇದೇ ರೀತಿ ಮಾಡಲು ಹೋಗಿದ್ದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಇಂತಹ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜ ಮರ್ಯಾದೆ ಕೊಡುತ್ತಿದ್ದಾರೆ ಎನ್ನುವ ಸಂದೇಶ ಒಳ್ಳೆಯದಲ್ಲ. ಬಲ ಇದ್ದವನಿಗೆ ಒಂದು ಬಡವನಿಗೆ ಒಂದು ಎಂಬ ಸಂದೇಶ ಹೋಗುತ್ತದೆ ಎಂದು ಸಿ.ಟಿ. ರವಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular