HomeKarnatakaBREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ...

BREAKING: ನಟ ದರ್ಶನ್ ಗೆ ಬಿಗ್ ಶಾಕ್: ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಲು ಕೋರಿ ಆರೋಪಿ ಪ್ರದೋಷ್ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿಇದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್ ಗೆ ಹೈಕೋರ್ಟ್ ನಲಿ ಕೂಡ ಹಿನ್ನಡೆಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರಿ 59ನೇ ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಪ್ರಕ್ರಿಯೆಯಲ್ಲಾಗುವ ಲೋಪದೋಷಗಳ ಬಗ್ಗೆ ವಾದಿಸಲು ಅವಕಾಶ ನೀಡಬೇಕೆಂದು ದರ್ಶನ್ ಪರ ವಕೀಲರು ಸಿಸಿಹೆಚ್ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ದರ್ಶನ್ ಸೇರಿದಂತೆ ಯಾವುದೇ ಆರೋಪಿಗಳ ವಾದ ಆಲಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಸಿಸಿಹೆಚ್ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ದರ್ಶನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಸಿಸಿಹೆಚ್ ಕೋರ್ಟ್ ನ ಆದೇಶದಲ್ಲಿ ಮಧ್ಯಪ್ರವ್ರ‍ೇಶ ಮಾಡುವುದಿಲ್ಲ. ಮಾಫಿ ಸಾಕ್ಷಿ ವಿಚಾರದಲ್ಲಿ ಸಹ ಆರೋಪಿಗಳಿಗೆ ವಾದ ಮಂಡಿಸಲು ಯಾವುದೇ ಅಧಿಕಾರವಿರುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಮಾಫಿ ಸಾಕ್ಷಿಗೆ ಆಕ್ಷೇಪ ವ್ಯಕ್ತಪಡಿಸುವ ಅಧಿಕಾರ ಸಹಆರೋಪಿಗೆ ಇರುವುದಿಲ್ಲ. ಈಗಾಗಲೇ ವಿನಯ್ ಕುಲಕರ್ಣಿ ಕೇಸ್ ನಲ್ಲಿ ಈ ವಿಚಾರವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿದಿದೆ. ಮಾಫಿ ಸಾಕ್ಷಿ ವಿಚಾರದಲ್ಲಿ ಯಾವುದೇ ವಾದ ಮಂಡಿಸುವ ಹಕ್ಕು ದರ್ಶನ್ ಹಾಗೂ ಇತರ ಸಹಆರೋಪಿಗಳಿಗೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ದರ್ಶನ್ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಸಿಸಿಹೆಚ್ ಕೋರ್ಟ್ ಆದೇಶ ಪ್ರಶ್ನಿಸಿದ್ದ ದರ್ಶನ್ ಗೆ ಹೈಕೋರ್ಟ್ ನಲ್ಲಿಯೂ ಹಿನ್ನಡೆಯಾಗಿದೆ.

ಪ್ರಕರಣದ 14ನೇ ಆರೋಪಿ ಪ್ರದೋಷ್ ಕೊಲೆಯಾದ ದಿನ ನಡೆದ ಸಂಪೂರ್ಣ ಘಟನೆಯನ್ನು ನ್ಯಾಯಾಲಯದ ಮುಂದೆ ತೆರೆದಿಡಲು ಮುಂದಾಗಿದ್ದು, ತನಗೆ ಮಾಫಿ ಸಾಕ್ಷಿಯಾಗಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದನು. ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ದೊಡ್ಡ ತಿರುವು ಸಿಗುವ ಸಾಧ್ಯತೆ ಇರುವುದರಿಂದ, ಪ್ರದೋಷ್‌ನನ್ನು ಸಾಕ್ಷಿಯನ್ನಾಗಿ ಪರಿಗಣಿಸುವುದಕ್ಕೂ ಮುಂಚಿತವಾಗಿ ದರ್ಶನ್ ಸೇರಿದಂತೆ ಇತರ ಆರೋಪಿಗಳ ಪರ ವಾದವನ್ನು ಆಲಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಿಸಿಹೆಚ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

59ನೇ ಸಿಸಿಹೆಚ್ ಕೋರ್ಟ್ ಜಡ್ಜ್ ಸುಜಾತಾ ಮಡಿವಾಳಪ್ಪ ಅವರು ಪ್ರದೋಷ್ ಅರ್ಜಿಗೆ ಸಂಬಂಧಿಸಿದಂತೆ ದರ್ಶನ್ ಹಾಗೂ ಇತರೆ ಆರೋಪಿಗಳ ಆಕ್ಷೇಪಣೆಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದ್ದರು. ಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಹಿನ್ನಡೆಯಾಗಿದ್ದರಿಂದ, ಅವರು ಸಿಸಿಹೆಚ್ ಕೋರ್ಟ್ ಆದೇಶಕ್ಕೆ ತಡೆ ತರಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಕೂಡ ದರ್ಶನ್ ಗೆ ಹಿನ್ನಡೆಯಾಗಿದ್ದು, ಅರ್ಜಿ ವಜಾಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular