ಬೆಂಗಳೂರು:ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವುದನ್ನು ತಡೆಯಲು ನಟ ದರ್ಶನ್ ಪರ ಕಾನೂನು ಹೋರಾಟ ಮುಂದುವರಿದಿದೆ. ಆದರೆ, ದರ್ಶನ್ ಪರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಸೆಷನ್ಸ್ ಕೋರ್ಟ್ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ಸೆಪ್ಟೆಂಬರ್ 28ರಂದು ದಿನಾಂಕ ನಿಗದಿ ಮಾಡಿದೆ.
ಪ್ರದೋಷ್ ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಕೆ ಮಾಡಿದ್ದು, ಕೆಲವರ ಸಂಪರ್ಕ ಹಾಗೂ ಒತ್ತಡದಿಂದ ಮಾಫಿ ಸಾಕ್ಷಿಯಾಗಿದ್ದಾರೆಎಂಬ ಆರೋಪವನ್ನು ದರ್ಶನ್ ಪರ ವಕೀಲರು ಮುಂದಿಟ್ಟಿದ್ದರು.
ಈ ಬಗ್ಗೆ ನಡೆಯುತ್ತಿರುವ ತನಿಖೆ ಪೂರ್ಣಗೊಳ್ಳುವವರೆಗೆ ಅವರ ಹೇಳಿಕೆ ದಾಖಲಿಸಬಾರದು ಎಂದು ಮನವಿ ಮಾಡಲಾಗಿತ್ತು.
ಆದರೆ, ಪ್ರದೋಷ್ ಮಾಫಿ ಸಾಕ್ಷಿಯಾಗಿರುವುದನ್ನು ಪ್ರಶ್ನಿಸಲು ಸಹ ಆರೋಪಿಗಳಿಗೆ ನೇರ ಕಾನೂನುಬದ್ಧ ಹಕ್ಕಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಪ್ರದೋಷ್ ಅವರನ್ನು ಪಾಟೀ ಸವಾಲು ಮಾಡುವ ಹಕ್ಕು ದರ್ಶನ್ ಸೇರಿದಂತೆ ಆರೋಪಿಗಳಿಗೆ ಇರುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.
ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ದರ್ಶನ್ ಪರ ವಕೀಲರು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ದಿನಾಂಕವನ್ನು ಮುಂದೂಡಬೇಕು ಎಂದು ಸೆಷನ್ಸ್ ಕೋರ್ಟ್ಗೆ ಮನವಿ ಮಾಡಲಾಗಿತ್ತು. ಆದರೆ, ಸೆ.28ರ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಇದರಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಪ್ರದೋಷ್ ಅವರ ಹೇಳಿಕೆ ಮಹತ್ವದ ಬೆಳವಣಿಗೆಯಾಗುವ ಸಾಧ್ಯತೆಯಿದೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. 2024ರ ಜೂನ್ನಲ್ಲಿ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ ಎಂಬುದು ಪೊಲೀಸರ ಆರೋಪ. ಮೃತದೇಹ ಬೆಂಗಳೂರಿನ ಚರಂಡಿಯೊಂದರಲ್ಲಿ ಪತ್ತೆಯಾಗಿತ್ತು.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿದಿದೆ. 2024ರ ಜೂನ್ನಲ್ಲಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಗಿದೆ ಎಂಬುದು ಪೊಲೀಸರ ಆರೋಪ.ರೇಣುಕಾಸ್ವಾಮಿ ಅವರು ಚಿತ್ರದುರ್ಗ ಮೂಲದವರಾಗಿದ್ದು, ಅವರ ಮೃತದೇಹ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿತ್ತು. ತನಿಖೆಯ ಬಳಿಕ ದರ್ಶನ್ರನ್ನು A2 ಆರೋಪಿ ಹಾಗೂ ಪವಿತ್ರಾ ಗೌಡರನ್ನು A1 ಆರೋಪಿ ಎಂದು ಪೊಲೀಸರು ದಾಖಲಿಸಿದ್ದರು.ಪ್ರಕರಣದ 14ನೇ ಆರೋಪಿ ಪ್ರದೋಷ್ ರಾವ್ ಇದೀಗ ಮಾಫಿ ಸಾಕ್ಷಿಯಾಗಲು ಮುಂದೆ ಬಂದಿದ್ದಾರೆ. ಪ್ರಕರಣದ ಸಂಚು, ರೇಣುಕಾಸ್ವಾಮಿ ಹತ್ಯೆ ಹಾಗೂ ಮೃತದೇಹ ವಿಲೇವಾರಿ ಸೇರಿದಂತೆ ಸಹ ಆರೋಪಿಗಳ ಪಾತ್ರದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವುದಾಗಿ ಪ್ರದೋಷ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಏನಾಗಿದೆ?
ರೇಣುಕಾಸ್ವಾಮಿಹತ್ಯೆ ಪ್ರಕರಣದಲ್ಲಿ ದರ್ಶನ್ರನ್ನು ಎರಡನೇ ಆರೋಪಿ (A2) ಎಂದು
ಪೊಲೀಸರು ದಾಖಲಿಸಿದ್ದಾರೆ. ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧತನಿಖೆ ನಡೆದಿತ್ತು.
ಪ್ರಕರಣದ14ನೇ ಆರೋಪಿ ಪ್ರದೋಷ್ ರಾವ್ ಇತ್ತೀಚೆಗೆ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಬಗ್ಗೆ ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸುವುದಾಗಿ ಅವರು ತಿಳಿಸಿದ್ದರು. ಬೆಂಗಳೂರಿನ ವಿಚಾರಣಾ ನ್ಯಾಯಾಲಯ ಪ್ರದೋಷ್ಗೆ ಮಾಫಿ ನೀಡಲು ಒಪ್ಪಿಗೆ ನೀಡಿ, ಅವರನ್ನು ಪ್ರಾಸಿಕ್ಯೂಷನ್ ಸಾಕ್ಷಿ (Approver)ಯಾಗಿ ಪರಿಗಣಿಸಿದೆ.

