ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚನೆ

ಮಂಡ್ಯ: ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚಿಸಿದ್ದಾರೆ. ಅಮೆರಿಕದಿಂದ ಬರಲು ಕೆಲವು ತಾಂತ್ರಿಕ ಕಾರಣದಿಂದ ತಡವಾದ ಹಿನ್ನೆಲೆಯಲ್ಲಿ ಪಾಂಡವಪುರದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸದಿರುವುದು ತಪ್ಪಾಗಿದ್ದು, ಇದಕ್ಕಾಗಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೋರುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬಾರದು ಎನ್ನುವ ಉದ್ದೇಶ ನನ್ನದಾಗಿರಲಿಲ್ಲ. ಅಮೆರಿಕದಲ್ಲಿದ್ದ ನಾನು ಬರಲು ಕೆಲವು ಗಂಟೆ ತಡವಾದ ಕಾರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಶಾಸಕನಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ನನ್ನ ಜವಾಬ್ದಾರಿಯಾಗಿದ್ದು, ನನ್ನಿಂದ ತಪ್ಪಾಗಿದೆ. ಇದಕ್ಕಾಗಿ ಕ್ಷೇತ್ರದ ಎಲ್ಲಾ ಜನರಲ್ಲಿ ಕ್ಷಮೆ ಯಾಚಿಸುತ್ತೇನೆ. ಮುಂದೆ ಇಂಥ ತಪ್ಪು ನಡೆದಂತೆ ನೋಡಿಕೊಳ್ಳುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read