HomeLatest NewsBREAKING: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್...

BREAKING: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್ ಜಾರಿ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ-ತಾಯಿ ಸೇರಿದಂತೆ ಸಾಕ್ಷಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹಾಗೂ ತಾಯಿಗೆ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 17ರಂದು ವಿಚಾರಣೆ ವೇಳೆ ಹಾಜರಿರುವಂತೆ ಸೂಚನೆ ನೀಡಿದೆ. ಕೋರ್ಟ್ ನಲ್ಲಿ ಟ್ರಯಲ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ 7 ಹಾಗೂ 8 ನೇ ಸಾಕ್ಷಿಗಳಾಗಿರುವ ರೇಣುಕಾಸ್ವಾಮಿ ತಂದೆ-ತಾಯಿಗಳಿಗೆ ಸಮನ್ಸ್ ನೀಡಲಾಗಿದೆ.

ಇದೇ ವೇಳೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಇರುವ ಬ್ಯಾರಕ್ ನಲ್ಲಿ ಟಿವಿ ಅಳವಡಿಸಲು ಕೋರ್ಟ್ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular