ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್, ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಸೇರಿದಂತೆ ಒಬ್ಬೊಬ್ಬ ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ.
7 ಪೊಲೀಸ್ ಇನ್ಸ್ ಪೆಕ್ಟರ್ ಗಳ ಸಮ್ಮುದಲ್ಲಿ 7 ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ. ಗೋವಿಂದರಾಜನಗರ, ವಿಜಯನಗರ, ಕಾಮಾಕಿಷಿಪಾಳ್ಯ, ಚಂದ್ರಾಲೇಔಟ್, ಬಸವೇಶ್ವರ ನಗರ, ರಾಜರಾಜೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ ಪೆಕ್ಟರ್ ಗಳ ಸಮ್ಮುಖದಲ್ಲಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ.
ಎಲ್ಲಾ ಆರೋಪಿಗಳನ್ನು ಬಂಧಿಸಿ ಬಳಿಕ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಸ್ಥಳಾಂತರಿಸಲಾಗುತ್ತದೆ. ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯೋನ್ಮುಖರಾಗಿದ್ದಾರೆ.