ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಟ ದರ್ಶನ್ ಬಂಧನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ತಮಿಳುನಾಡಿನಲ್ಲಿದ್ದ ನಟ ದರ್ಶನ್, ಸುಪ್ರೀಂ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆಯೇ ಬೆಂಗಳೂರೂರಿಗೆ ಆಗಮಿಸಿದ್ದಾರೆ.
ತಮ್ಮ ರೆಡ್ ರ್ಯಾಗ್ಲರ್ ಜೀಪಿನಲ್ಲಿ ನೇರವಾಗಿ ಪತ್ನಿ ವಿಜಯಲಕ್ಷ್ಮೀ ಅವರ ಹೊಸಕೆರೆಹಳ್ಳಿ ಫ್ಲ್ಯಾಟ್ ಗೆ ಆಗಮಿಸಿದ್ದು, ದರ್ಶನ್ ಜೀಪಿನ ಹಿಂದೆಯೇ ಪೊಲೀಸರ ವಾಹನವೂ ವಿಜಯಲಕ್ಷ್ಮೀ ನಿವಾಸಕ್ಕೆ ತೆರಳಿದೆ. ಕೆಲವೇ ಕ್ಷಣಗಳಲ್ಲಿ ದರ್ಶನ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.