HomeLatest NewsBREAKING: ನಟ ದರ್ಶನ್ ಮತ್ತೆ ಅರೆಸ್ಟ್

BREAKING: ನಟ ದರ್ಶನ್ ಮತ್ತೆ ಅರೆಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ಆಗಿರುವ ದರ್ಶನ್ ರನ್ನು ಹೊಸಕೆರೆಹಳ್ಳಿ ನಿವಾಸದಲ್ಲಿ ಬಂಧಿಸಲಾಗಿದೆ.

ಕಾಮಾಕ್ಷಿಪಾಳ್ಯ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಅವರ ನೇತೃತ್ವದಲ್ಲಿ ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮೀ ಅವರ ಫ್ಲ್ಯಾಟ್ ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎ1 ಪವಿತ್ರಾ ಗೌಡ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅಂತಿಮವಾಗಿ ನಟ ದರ್ಶನ್ ರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ

For Latest News Updates, Join Our Whatsapp Community🚩
RELATED ARTICLES

Most Popular