ನವದೆಹಲಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ಭವಿಷ್ಯ ಇಂದು ನಿರ್ಧಾರವಾಗಲಿದೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಲಿದೆ. ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸರ್ಕಾರದ ಪರ ವಕೀಲ ಅನಿಲ್ ನಿಶಾನ್, ದರ್ಶನ್ ಗೆ ಜಾಮೀನು ರದ್ದಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ನಾವು ಸಮರ್ಥವಾಗಿ ವಾದ ಮಂಡನೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ಕೂಡ ದರ್ಶನ್ ಗೆ ಯಾಕೆ ಜಾಮೀನು ರದ್ದು ಮಾಡಬಾರದು ಎಂದು ಅಭಿಪ್ರಾಯ ಪಟ್ಟಿದೆ. ಹಾಗಾಗಿ ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರಾದ್ದಾಗುವ ಸಾಧ್ಯತೆ ಇದೆ. ಅಂತಿಮವಾಗಿ ನ್ಯಾಯಾಲಯದ ತೀರ್ಪು ಏನಿರಲಿದೆ ನೋಡೋಣ ಎಂದು ಹೇಳಿದ್ದಾರೆ.