ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಬೇರೆ ಬ್ಯಾರಕ್ ಗೆ ಸ್ಥಳಾಂತರ ಮಾಡಲಾಗಿದೆ.
ಪವಿತ್ರಾ ಗೌಡ ಅವರನ್ನು ಇಬ್ಬರೂ ಕೈದಿಗಳು ಇದ್ದ ಬ್ಯಾರಕ್ ನಿಂದ 16 ಕೈದಿಗಳಿರುವ ಬ್ಯಾರಕ್ ಗೆ ಸ್ಥಳಾಂತರ ಮಾಡಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ ನಳ್ಳಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೈದಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದ್ದು, ಬಿಗಿ ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರದೂಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣದ ಆರೋಪಿ ಮತ್ತು ನಟ ದರ್ಶನ್, ಪ್ರದೂಷ್ ಭದ್ರತೆ ಹೆಚ್ಚಿಸಲಾಗಿದ್ದು, ಸಿಸಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇರಿಸಲಾಗಿದೆ.
ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆಯಾದ ನಂತರ ಅವರನ್ನು ಭದ್ರತಾ ಬ್ಯಾರಕ್ ನಿಂದ ಸಾಮಾನ್ಯ ಬ್ಯಾರಕ್ ಗೆ ಸ್ಥಳಾಂತರಿಸಲಾಗಿದ್ದು, ಸಜಾ ಕೈದಿಯ ಸಮವಸ್ತ್ರವನ್ನು ಧರಿಸಿರುವಂತೆ ಸೂಚನೆ ನೀಡಲಾಗಿದೆ. ಪವಿತ್ರಾ ಗೌಡ ವಿಶೇಷ ಸೌಲಭ್ಯ ಪಡೆದುಕೊಳ್ಳುತ್ತಿರುವ ಅನುಮಾನದ ಮೇಲೆ ಸಾಮಾನ್ಯ ಬ್ಯಾರಕ್ ಗೆ ಸ್ಥಳಾಂತರ ಮಾಡಲಾಗಿದೆ ಎನ್ನಲಾಗಿದೆ.

