ವಿದೇಶಕ್ಕೆ ತೆರಳಲು ಅನುಮತಿ ಕೋರಿದ ದರ್ಶನ್: ಮೇ 30ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿನಿಮಾ ಚಿತ್ರೀಕರಣಕ್ಕಾಗಿ ಯುರೋಪ್ ಮತ್ತು ದುಬೈಗೆ ತೆರಳಲು ಅವಕಾಶ ನೀಡುವಂತೆ ಕೋರಿ ನಟ ದರ್ಶನ್ ನಗರದ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಜಾಮೀನು ಷರತ್ತಿನಲ್ಲಿ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ.

ದರ್ಶನ್ ಅವರಿಗೆ ಸಿನಿಮಾ ಕ್ಷೇತ್ರವೇ ಉದ್ಯೋಗದ ಆಸರೆಯಾಗಿದ್ದು, ಅವರ ಮುಂದಿನ ಚಿತ್ರದ ಚಿತ್ರೀಕರಣ ವಿದೇಶಗಳಲ್ಲಿ ನಿಗದಿಯಾಗಿದೆ. ಹೀಗಾಗಿ 25 ದಿನ ದುಬೈ, ಯುರೋಪ್ ದೇಶಗಳಿಗೆ ತೆರಳಲು ಅನುಮತಿ ನೀಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಮೇ 30ಕ್ಕೆ ಆದೇಶ ಕಾಯ್ದಿರಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read