HomeIndiaBIG NEWS: ನಟ ದರ್ಶನ್ ಬೇಲ್ ರದ್ದಾಗುತ್ತಾ…? ಸುಪ್ರೀಂ ಕೋರ್ಟ್ ನಲ್ಲಿಂದು ಮೇಲ್ಮನವಿ ವಿಚಾರಣೆ ಬಗ್ಗೆ...

BIG NEWS: ನಟ ದರ್ಶನ್ ಬೇಲ್ ರದ್ದಾಗುತ್ತಾ…? ಸುಪ್ರೀಂ ಕೋರ್ಟ್ ನಲ್ಲಿಂದು ಮೇಲ್ಮನವಿ ವಿಚಾರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟಿನಲ್ಲಿ ಜಾಮೀನು ರದ್ದು ಅರ್ಜಿಯ ಮೇಲ್ಮನವಿ ವಿಚಾರಣೆ ನಡೆಸಲಾಗುವುದು.

ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಿಂದ 7 ಮಂದಿ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದು, ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಜನವರಿ 6ರಂದು ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಶ್ ಅವರ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದ್ದು, ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular