HomeEntertainmentಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ ಜಾಮೀನು ಪಡೆದುಕೊಂಡಿದ್ದಾರೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಹೈಕೋರ್ಟ್ ಗೆ ಮಾಹಿತಿ ನೀಡಿ ದರ್ಶನ್ ಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ನೆರವೇರಿಸಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ಮಧ್ಯಂತರ ಜಾಮೀನು ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅ. 30ರಂದು ಹೈಕೋರ್ಟ್ ದರ್ಶನ್ ಗೆ ಆರು ವಾರ ಮಧ್ಯಂತರ ಜಾಮೀನು ನೀಡಿದ್ದು, ಇದುವರೆಗೂ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಹೀಗಾಗಿ ಜಾಮೀನು ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular