HomeKarnatakaದರ್ಶನ್‌ಗೆ ಹೆಚ್ಚಿದ ಸಂಕಷ್ಟ: ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್!

ದರ್ಶನ್‌ಗೆ ಹೆಚ್ಚಿದ ಸಂಕಷ್ಟ: ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್!

ಬೆಂಗಳೂರು-ನಟ ದರ್ಶನ್‌ ಹಾಗೂ ಇತರರ ವಿರುದ್ಧದ ಕುಖ್ಯಾತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ (ಅಪ್ರೂವರ್) ಅರ್ಜಿಯನ್ನು ಕೋರ್ಟ್ ಅಧಿಕೃತವಾಗಿ ಅಂಗೀಕರಿಸಿದೆ.

​ಸಿಸಿಹೆಚ್‌ 42 (CCH 42) ಕೋರ್ಟ್ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದು, ಕೆಲವು ಕಠಿಣ ನಿಬಂಧನೆಗಳೊಂದಿಗೆ ಪ್ರದೋಷ್‌ಗೆ ಮಾಫಿ ಸಾಕ್ಷಿಯಾಗಲು ಅನುಮತಿ ನೀಡಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ಪ್ರತಿಯೊಂದು ಸತ್ಯಾಂಶವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಕೋರ್ಟ್ ಮುಂದೆ ಹೇಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಪ್ರದೋಷ್ ಸುಳ್ಳು ನುಡಿದರೆ ಅಥವಾ ತಪ್ಪು ಮಾಹಿತಿ ನೀಡಿದರೆ, ಆತನಿಗೆ ನೀಡಲಾದ ಕ್ಷಮಾದಾನವನ್ನು ರದ್ದುಪಡಿಸಿ ಮತ್ತೆ ಆರೋಪಿಯಾಗಿ ಪರಿಗಣಿಸಿ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್‌ಗೆ ಮುಕ್ತ ಅವಕಾಶವಿರುತ್ತದೆ.

ವಿಚಾರಣೆ (Trial) ಸಂಪೂರ್ಣ ಮುಗಿಯುವವರೆಗೆ ಪ್ರದೋಷ್ ಜೈಲಿನಲ್ಲಿಯೇ ಇರಬೇಕಾಗುತ್ತದೆ.

ಇದುವರೆಗೆ ಪ್ರಕರಣದ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿದ್ದ ಪ್ರದೋಷ್ ಈಗ ಸರ್ಕಾರದ ಸಾಕ್ಷಿಯಾಗಿ (Approver) ಬದಲಾಗಿರುವುದು ನಟ ದರ್ಶನ್ ಹಾಗೂ ಇ Aಗ್ಯಾಂಗ್‌ನ ಇತರ 16 ಆರೋಪಿಗಳಿಗೆ ಕಾನೂನು ತೊಡಕುಗಳನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರದೋಷ್ ನೀдниಡುವ ಸಾಕ್ಷ್ಯಗಳು ಮುಂದಿನ ವಿಚಾರಣೆಯಲ್ಲಿ ನಿರ್ಣಾಯಕ ಪಾತ್ರವಹಿಸುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

​ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗಾಗಲೇ ದರ್ಶನ್‌ಗೆ ಕೋರ್ಟ್‌ನಲ್ಲಿ ಹಲವು ಬಾರಿ ಜಾಮೀನು ಹಾಗೂ ಇತರೆ ಅರ್ಜಿಗಳಲ್ಲಿ ಹಿನ್ನಡೆಯಾಗಿದ್ದು, ಇದೀಗ ಸಹಚರನೇ ಮಾಫಿ ಸಾಕ್ಷಿಯಾಗಿ ಬದಲಾಗಿರುವುದು ದರ್ಶನ್‌ಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯು ಕಾನೂನು ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

​

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular