HomeKarnatakaBREAKING NEWS: ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ

BREAKING NEWS: ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಗಾಗಿ ಜೈಲಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ಪತಿಯನ್ನು ನೋಡಲು ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ಹಾಗೂ ವಕೀಲರೊಂದಿಗೆ ಆಗಮಿಸಿದ್ದಾರೆ.

ಸೋಮವಾರ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸುವ ನಿಟ್ಟಿನಲ್ಲಿ ಇಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಕೀಲರೊಂದಿಗೆ ದರ್ಶನ್ ಭೇಟಿಗೆ ಜೈಲಿಗೆ ಭೇಟಿ ನೀಡಿದ್ದು, ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular