HomeKarnatakaಬಳ್ಳಾರಿ ಸೆಂಟ್ರಲ್ ಜೈಲು ಸೇರಿದ ನಟ ದರ್ಶನ್: ಪತಿ ಭೇಟಿಗೆ ಅನುಮತಿ ಕೇಳಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ ನಟ ದರ್ಶನ್: ಪತಿ ಭೇಟಿಗೆ ಅನುಮತಿ ಕೇಳಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಇಂದು ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಂದು ದರ್ಶನ್ ಭೇಟಿಗೆ ಅನುಮತಿ ನೀಡುವಂತೆ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿ ಜೈಲಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸೋಮವಾರ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸುವ ನಿಟ್ಟಿನಲ್ಲಿ ಇಂದು ಪತ್ನಿ ವಿಜಯಲಕ್ಷ್ಮೀ, ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಭೇಟಿ ನೀಡಿವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular