ಧನ್ಯೋಸ್ಮಿ ಸೆಲೆಬ್ರಿಟಿಸ್…! ಧನ್ಯವಾದಗಳು ಕರ್ನಾಟಕ: ಕಾಟೇರ’ ಗೆಲುವಿಗೆ ದರ್ಶನ್ ಖುಷ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಬಿಡುಗಡೆಯಾದಲ್ಲೆಲ್ಲಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಗುರುವಾರ ಮಧ್ಯರಾತ್ರಿಯಿಂದಲೇ ಫ್ಯಾನ್ಸ್ ಶೋ ವಿಶೇಷ ಪ್ರದರ್ಶನಗಳು ಆರಂಭವಾಗಿದ್ದು, ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಬಹು ನಿರೀಕ್ಷಿತ ‘ಕಾಟೇರ’ ಎಲ್ಲೆಡೆ ತುಂಬಿದ ಗೃಹಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಮೊದಲ ದಿನವೇ 19.75 ಕೋಟಿ ರೂ. ಕಲೆಕ್ಷನ್ ಮಾಡಿದೆ. ಎರಡು ದಿನದಲ್ಲಿ ಸುಮಾರು 40 ಕೋಟಿಗೂ ಅಧಿಕ ವ್ಯವಹಾರ ನಡೆಸಿದೆ. ಮೂರನೇ ದಿನದ ವೇಳೆಗೆ ‘ಕಾಟೇರ’ ಕಲಕ್ಷನ್ 60 ಕೋಟಿ ರೂ. ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.

ಚಿತ್ರದ ಭರ್ಜರಿ ಯಶಸ್ವಿಗಾಗಿ ದರ್ಶನ್ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ‘’ ಏನೆಂದು ನಾ ಹೇಳಲಿ, ನಿಮ್ಮಯ ಪ್ರೀತಿ-ಆಶೀರ್ವಾದಕೆ ಕೊನೆಯಲ್ಲಿ! ಧನ್ಯೋಸ್ಮಿ ಸೆಲೆಬ್ರಿಟಿಸ್! ಹೃದಯಪೂರ್ವಕ ಧನ್ಯವಾದಗಳು ಕರ್ನಾಟಕ. ಈ ಪ್ರೀತಿಯ ಚಪ್ಪಾಳೆ ನಮ್ಮ #Kaatera ಚಿತ್ರತಂಡದ ಮನತುಂಬಿದೆ. Speechless’’ ಎಂದು ಪೋಸ್ಟ್ ಮಾಡಿದ್ದಾರೆ.

ತರುಣ್ ಸುಧೀರ್ ನಿರ್ದೇಶನ, ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಿರುವ ಚಿತ್ರದಲ್ಲಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್, ಜಗಪತಿ ಬಾಬು, ವಿನೋದ್ ಆಳ್ವ, ಅವಿನಾಶ್, ಕುಮಾರ್ ಗೋವಿಂದ್, ವೈಜನಾಥ್ ಬಿರಾದಾರ್, ಶ್ರುತಿ, ಪದ್ಮಾವಾಸತಿ ಸೇರಿದಂತೆ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.

https://twitter.com/dasadarshan/status/1741038549523419637

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read