HomeEntertainmentBIG NEWS: ದರ್ಶನ್ ಅವರಿಂದ 1 ಕೋಟಿ ಸಾಲ ಪಡೆದಿದ್ದೇನೆ: ಅವರ ಮೇಲಿನ ಗೌರವ ನನ್ನನ್ನು...

BIG NEWS: ದರ್ಶನ್ ಅವರಿಂದ 1 ಕೋಟಿ ಸಾಲ ಪಡೆದಿದ್ದೇನೆ: ಅವರ ಮೇಲಿನ ಗೌರವ ನನ್ನನ್ನು ಊರು ಬಿಡುವಂತೆ ಮಾಡಿತು: ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹೇಳಿಕೆ

ಬೆಂಗಳೂರು: ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಚಾಲೇಂಜಿಂಗ್ ಸ್ಟಾರ್ ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಈಗ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ತಾವು ಇಷ್ಟು ವರ್ಷಗಳ ಕಲ ತಲೆಮರೆಸಿಕೊಳ್ಳಲು ಕಾರಣವೇನು? ಈವರೆಗೆ ತಾನು ಏನು ಮಾಡುತ್ತಿದ್ದೆ? ಎಂಬ ಬಗ್ಗೆ ವಿವರಿಸಿದ್ದು, ಹಲವರಿಗೆ ತಾನು ತೊಂದರೆ ಕೊಟ್ಟಿದ್ದಕ್ಕೆ ಕ್ಷಮೆಯನ್ನೂ ಯಾಚಿಸಿದ್ದಾರೆ.

ಸಾಲಬಾಧೆ, ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣಕ್ಕೆ ತಾನು ನಾಪತ್ತೆಯಾಗಬೇಕಾಯಿತು. ಆದರೆ ತಾನು ಸಾವನ್ನಪ್ಪಿದ್ದಾಗಿ ಸುದ್ದಿ ಹರಡಿದ ವಿಷಯ ತಿಳಿದು ತಾನು ಬದುಕಿದ್ದಾಗಿ ಪತ್ನಿಗೆ ಪತ್ರ ಬರೆದಿದ್ದಾಗಿ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ತಾನು ಕೆಲ ವರ್ಷಗಳ ಕಾಲ ನೇಪಾಳದಲ್ಲಿ ತನ್ನ ಗೆಳೆಯನ ಹೋಟೆಲ್ ನಲ್ಲಿ ಇದ್ದುದಾಗಿ ಹೇಳಿದ್ದಾರೆ. ನನ್ನಿಂದ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ನೋವಾಗಿದೆ. ಅವರೆಲ್ಲರಿಗೂ ಕ್ಷಮೆ ಕೇಳುತ್ತೇನೆ. ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಇಂಜಿನಿಯರಿಂಗ್ ಮುಗಿಸಿ, ಅಸಿಸ್ಟಂಟ್ ಡೈರೆಕ್ಟರ್ ಆದ ನಂತರ ದರ್ಶನ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡಿದೆ. ಮೊದಲ ಸಲ ಸಿನಿಮಾ ಮಾಡಿದಾಗ ಅಂದುಕೊಂಡ ರೀತಿಯಲ್ಲಿ ಕೈ ಹಿಡಿಯಲಿಲ್ಲ. ಸಿನಿಮಾ ನಿರ್ಮಾಣ ಮಾಡಿದೆ, ಡಿಸ್ಟ್ರಿಬ್ಯೂಷನ್ ಮಾಡಿದೆ, ಹೋಟೆಲ್ ಬಿಸ್ನೆಸ್ ಮಾಡಿದೆ. ಯಾವುದೂ ಕೈ ಹಿಡಿಯಲಿಲ್ಲ. ನಂತರ ಹಲವು ವಿಷಯದಲ್ಲಿ ಕೈ ಸುಟ್ಟುಕೊಂಡೆ. ಮೈತುಂಬ ಸಾಲ ಮಾಡಿದ್ದೆ. ನಂತರ ಸಾಯುವ ನಿರ್ಧಾರಕ್ಕೂ ಬಂದೆ ಆದರೆ, ಸಾಯುವ ನಿರ್ಧಾರದಿಂದ ಹಿಂದೆ ಸರಿದೆ.

ಅಂದು ಕುಂದಾಪರದಿಂದ ಹೊರಟೆ. ಸವದತ್ತಿಗೆ ಬಂದೆ. ನನ್ನ ಗೆಳೆಯನ ಬಳಿ ಹಣ ಪಡೆದೆ. ಕೊಲ್ಲಾಪುರ, ಸೊಲ್ಲಾಪುರ, ಉತ್ತರ ಭಾರತ ಸೇರಿದಂತೆ ಅನೇಕ ಕಡೆ ಸುತ್ತಾಡಿದೆ. ಹಲವು ಜಾಗದಲ್ಲಿ ಕೆಲವು ದಿನ ಇರ್ತಿದ್ದೆ, ಬಿಟ್ಟು ಹೋಗ್ತಿದ್ದೆ. ಹೋಟೆಲ್, ರೆಸಾರ್ಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಕೆಲಸ ಮಾಡಿದೆ ಎಂದು ವಿವರಿಸಿದ್ದಾರೆ.

ನನಗೆ ನೇಪಾಳದಲ್ಲಿ ಒಬ್ಬ ಗೆಳೆಯನಿದ್ದ. ಅವನ ಹೋಟೆಲ್ ಇತ್ತು. ಅಲ್ಲಿ ಸಾಕಷ್ಟು ಸಮಯ ಕಳೆದೆ. ನಾನು ಬದುಕಿದ್ದೀನಿ ಅಂತ ಮಿಸಸ್​​ಗೆ ಲೆಟರ್ ಬರೆದೆ. ತಾಯಿಗೂ ಬರೆದೆ. ನನಗೆ ಸಾಡೆಸಾತ್ ಇತ್ತು. ಈ ಕಾರಣಕ್ಕೆ ಅದು ಮುಗಿದ ಮೇಲೆ ಬಂದೆ. ಸತ್ಯ ಒಪ್ಪಿಕೊಳ್ಳಬೇಕು ಅಂತ ಅನಿಸಿತು. ತಂದೆ-ತಾಯಿ ತೀರಿದಾಗ ಬರೋಕೆ ಆಗಿಲ್ಲ. ಒಂದು ಹಿಡಿ ಮಣ್ಣು ಹಾಕೋಕೂ ಆಗಿಲ್ಲ. ಹೀಗಾಗಿ ನನಗೆ ತಪ್ಪಿತಸ್ಥ ಭಾವನೆ ಕಾಡುತ್ತಾ ಇತ್ತು ಎಂದು ಹೇಳಿದರು.

ದಿನಕರ್ ಅವರನ್ನು ಕಳೆದ ವರ್ಷ ಭೇಟಿ ಮಾಡಿದೆ. ದರ್ಶನ್​​ನ ಭೇಟಿ ಮಾಡಬೇಕಿತ್ತು. ಆಗ ನನಗೆ ಪ್ಯಾರಲಿಸಿಸ್ ಆಯ್ತು. 7 ತಿಂಗಳು ಬೆಡ್​ರೆಸ್ಟ್ ಮಾಡಬೇಕಾಯಿತು. ಮತ್ತೆ ರೆಡಿ ಆದೆ. ಒಂದೂವರೆ ತಿಂಗಳ ಹಿಂದೆ ಬಂದು ಸಾಲ ಕೊಟ್ಟ ಎಲ್ಲರನ್ನೂ ಕೇಳಿಕೊಂಡಿದ್ದೇನೆ. ಸೋತಿದ್ದೇನೆ, ಸತ್ತಿಲ್ಲ ಎಂದು ಹೇಳಿದೆ. ಎಲ್ಲರೂ ಪಾಸಿಟಿವ್​ ಆಗಿ ಮಾತನಾಡಿ ಧೈರ್ಯ ಹೇಳಿದ್ದಾರೆ ಎಂದರು.

ಸಾಲ ಮಾಡಿಕೊಂಡಾಗ ದರ್ಶನ್ ಬಳಿ 1 ಕೋಟಿ ರೂಪಾಯಿ ಸಹಾಯ ಕೇಳಿದೆ. ಅವರು ಕೊಟ್ಟರು. ಮತ್ತೆ ಕೇಳೋಕೆ ಮನಸ್ಸು ಬರಲಿಲ್ಲ. ನಾನು ಎಲ್ಲಿದ್ದೇನೆ ಎಂಬುದು ಅವರಿಗೆ ಗೊತ್ತಿರಲಿಲ್ಲ. ತೂಗುದೀಪ ಪ್ರೊಡಕ್ಷನ್ಸ್ ಚೆನ್ನಾಗಿ ನೋಡಿಕೊಂಡಿದೆ. ನಾನು ಅವರಿಗೆ ಮೋಸ ಮಾಡಿಲ್ಲ. ದರ್ಶನ್ ಬಳಿ ಕಷ್ಟ ಎಂದು ಹಣ ತೆಗೆದುಕೊಂಡಿದ್ದು ಅಷ್ಟೇ ಹೊರತು, ಮತ್ತೆ ಯಾವಾಗಲೂ ಹಣ ಮಾಡಿಲ್ಲ ಎಂದು ಹೇಳಿದರು.

ದರ್ಶನ್ ಅವರಿಗೆ ನಾನು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿತ್ತು. ಎಷ್ಟು ಸಾಲ ಮಾಡಿದ್ದೇನೆ ಅನ್ನೋದು ಗೊತ್ತಿರಲಿಲ್ಲ. ಅವರನ್ನು ಫೇಸ್ ಮಾಡೋಕೆ ಆಗಲ್ಲ ಅನ್ನೋದು ಗೊತ್ತಾಯ್ತು. ಅವರ ಮೇಲಿನ ಅಪಾರ ಗೌರವ ಊರನ್ನು ಬಿಡುವಂತೆ ಮಾಡಿತು ಎಂದು ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular