HomeKarnatakaBIG NEWS: ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಪ್ರತಿಭಟನೆಗೆ...

BIG NEWS: ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಪ್ರತಿಭಟನೆಗೆ ಕರೆ

ಬೆಂಗಳೂರು: ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟದಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ನಟರಾಜ್ ಬೊಮ್ಮಸಂದ್ರ ಮಾಹಿತಿ ನೀಡಿದ್ದು, ದರ್ಶನ್ ವಿರುದ್ಧ ಸುಳ್ಲು ದಾಖಲೆ ಸೃಷ್ಟಿಸಿರುವ ಎಸಿಪಿ ಚಂದನ್ ಹಾಗೂ ಇನ್ಸ್ ಪೆಜ್ಟರ್ ಗಿರೀಶ್ ಅವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಖಾಧಿಕಾರಿಗಳೇ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿ, ಒಬ್ಬ ನಟನನ್ನು ಜೈಲಿನಲ್ಲಿ ಕಳೆಯುವಂತೆ ಮಾಡಿದ್ದಾರೆ. ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ. ಯಾವುದೋ ಒತ್ತಡಕ್ಕೆ ಮಣಿದಿದು ಇಂತಹ ಕೃತ್ಯವೆಸಗುತ್ತಿರುವ ತನಿಖಾಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ತನಿಖೆಯನ್ನೇ ನಡೆಸದೇ ತಮಗೆ ಬೇಕಾದ ರೀತಿಯಲ್ಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ನೀಡುವಂತಹ ಕೆಲಸ ಮಾಡುತ್ತಿದ್ದರಎ. ಇದರ ವಿರುದ್ಧ ವಕೀಲರು ವಾದ ಮಂಡನೆ ಮಾಡುತ್ತಾ ದೂರು ದಾಖಲಿಸಿದ್ದಾರೆ. ಕಾನೂನು ರಕ್ಷಿಸಬೇಕಾದ ಪೊಲೀಸ್ ಅಧಿಕಾರಿಗಳು ಕರ್ತವ್ಯಲೋಪವೆಸಗಿದ್ದಾರೆ. ಅವರನ್ನು ಕೂಡಲೇ ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular